Friday, July 07, 2017

ಜುಲೈ 7 2017ರಂದು ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಬೇಕೂರು ಶಾಲೆಯ ನಿವೃತ ಮುಖ್ಯೋಪಾಧ್ಯಾಯರಾದ ಶ್ರೀ ಸುಬ್ರಾಯ ನoದೋಡಿ ಅವರು ತರಗತಿ ನಡೆಸಿದರು. ನೆಲ, ಜಲ, ವಾಯುವಿನ  ಸಂರಕ್ಷಣೆ ನಮ್ಮ ಕರ್ತವ್ಯ. ಇಂದಿನ ದಿನಗಳಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಮನುಷ್ಯನ ಅತಿಯಾಸೆಯಿಂದಾಗಿ ನೀರು, ಭೂಮಿ, ಅರಣ್ಯ ನಾಶವಾಗುತ್ತಿದ್ದು, ಇದರಿಂದ ಮನುಷ್ಯ ಸೇರಿದಂತೆ ಜೀವ ಸಂಕುಲದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ನೀರು, ಭೂಮಿ ಮತ್ತು ಗಾಳಿ ಮಲಿನವಾಗುತ್ತಿರುವುದರಿಂದ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ನಿಸರ್ಗವನ್ನು ಪುನ: ಸೃಷ್ಟಿಸುವುದು ಕಷ್ಟಸಾಧ್ಯವಾಗಿದ್ದು, ಈ ಕಾರಣಕ್ಕಾಗಿ ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಒತ್ತು ನೀಡಬೇಕಾಗಿದೆ. ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಶ್ರೀ ಯನ್ ರಾಮಚಂದ್ರ ಭಟ್ ಪ್ರಾಂಶುಪಾಲರು ಸ್ವಾಗತಿಸಿ, ಸಮಾಜ ಅಧ್ಯಾಪಕರಾದ ಸತೀಶ್ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಶಿವಪ್ರಸಾದ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು. 






No comments: