Thursday, July 12, 2018

ರಕ್ಷಕ ಶಿಕ್ಷಕ ಸಂಘದ ಮಹಾ ಸಭೆ  2018-2019

ಧರ್ಮತ್ತಡ್ಕ : ಧರ್ಮತ್ತಡ್ಕ ಹೈಯರ್ ಸೆಕೆಂಡರಿ ಶಾಲೆಯ  ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು 12-07-2018ರಂದು ಜರಗಿತು. ಸಂಘದ ಅಧ್ಯಕ್ಷ ಶ್ರೀ ಸುಂದರ ಶೆಟ್ಟಿ  ಅಧ್ಯಕ್ಷತೆ ವಹಿಸಿದರು. ಶ್ರೀ ಯನ್ ರಾಮಚಂದ್ರ ಭಟ್ ಪ್ರಾಂಶುಪಾಲರು ಪ್ರಾಸ್ತಾವಿಕ ಭಾಷಣ ಹಾಗೂ ಶಾಲಾ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರು.ಶಾಲಾ ಮ್ಯಾನೇಜರ್ ಶ್ರೀ ಯನ್ ಶಂಕರನಾರಾಯಣ ಭಟ್ ಶಾಲಾ ಅಭಿವೃದ್ಧಿ ಯೋಜನೆಯ ಕುರಿತು ಮಾತನಾಡಿದರು.ಶ್ರೀಮತಿ ಈಶ್ವರೀ ಡಿ ಗತ ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು. ಈ ಸಾಲಿನ PTA ಅಧ್ಯಕ್ಷರಾಗಿ ಶ್ರೀ ಗಿರೀಶ್ ಕುಮಾರ್ ,MPTA ಅಧ್ಯಕ್ಷೆಯಾಗಿ ಶ್ರೀಮತಿ ವಿಲ್ಮಾ ,PTA ಉಪಾಧ್ಯಕ್ಷರಾಗಿ  ಶ್ರೀ ಸುಂದರ ಶೆಟ್ಟಿ ,MPTA ಉಪಾಧ್ಯಕ್ಷೆಯಾಗಿ ಶ್ರೀಮತಿ ಪುಷ್ಪ  ಇವರು ಅವಿರೋಧವಾಗಿ ಆಯ್ಕೆಗೊಂಡರು.ಅಲ್ಲದೆ 18 ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಶಾಲಾ ಅಧ್ಯಾಪಕ ಶ್ರೀ ಸತೀಶ್ ಕುಮಾರ್ ಶೆಟ್ಟಿ  ಅವರು ಶಿಸ್ತು ಮತ್ತು ಶಾಲಾ ನಿಯಮಾವಳಿಗಳ ಬಗ್ಗೆ ರಕ್ಷಕರಿಗೆ ಮಾಹಿತಿ ನೀಡಿದರು.ಶಾಲೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ತಮ್ಮ ಸಂಪೂರ್ಣ ಸಹಾಯ ಸಹಕಾರಗಳನ್ನು ನೀಡುತ್ತೇವೆಂದು ರಕ್ಷಕರು ಹೇಳಿದರು.ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಶಾಲಾ ಅಧ್ಯಾಪಕ ಶ್ರೀ ಗೋವಿಂಧ ಭಟ್ ಇವರು ಸ್ವಾಗತಿಸಿ, ಶ್ರೀ ನರಸಿಂಹ ರಾಜ್ ವಂದಿಸಿದರು. ಶ್ರೀಮತಿ ಉಮಾ ದೇವಿ ಕಾರ್ಯಕ್ರಮ ನಿರೂಪಿಸಿದರು.ಎಲ್ಲರಿಗೂ  ಲಘು ಉಪಹಾರವನ್ನು ನೀಡಲಾಯಿತು 








No comments: