ಧರ್ಮತ್ತಡ್ಕ ವಿದ್ಯಾಲಯದಲ್ಲಿ ಆಟೋಟ ಸ್ಪರ್ಧೆ :
ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ವಿದ್ಯಾಲಯದಲ್ಲಿ ಶಾಲಾ ಮಟ್ಟದ ಆಟೋಟ ಸ್ಪರ್ಧೆಯು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಗಿರೀಶ್ ಕುಮಾರ್ ಕಯ್ಯಾರ್ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಶಾಲಾ ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ಅತಿಥಿಗಳನ್ನು ಸ್ವಾಗತಿಸಿ ಶುಭಹಾರೈಸಿದರು. ಶಾಲಾ ವ್ಯವಸ್ಥಾಪಕರಾದ ಶ್ರೀ ಯನ್ ಶಂಕರನಾರಾಯಣ ಭಟ್ ಮತ್ತು ಎ ಯು ಪಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಯನ್ ಮಹಾಲಿಂಗ ಭಟ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಧ್ಯಾಪಕರಾದ ಶ್ರೀ ರಾಮಕೃಷ್ಣ ಭಟ್ ವಂದಿಸಿ, ಶ್ರೀ ಗೋವಿಂದ ಭಟ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂತೋಷ್ ಕುಮಾರ್ ಇವರ ನೇತೃತ್ವದಲ್ಲಿ ಅಧ್ಯಾಪಕರ ಸಹಾಯದೊಂದಿಗೆ ಸುಮಾರು 13ಕ್ಕೂ ಹೆಚ್ಚು ವಿಭಾಗ ಕ್ರೀಡೆಗಳಲ್ಲಿ 300ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಪಾಲ್ಗೊಂಡರು.