Saturday, September 21, 2019

ಮಂಜೇಶ್ವರ ಉಪಜಿಲ್ಲಾ ಮಟ್ಟದ ಮೂರು ದಿನಗಳ ಆವಾಸಿಯ ಸಂಸ್ಕೃತ ಶಿಬಿರ ಶ್ರಿ ದುರ್ಗಾಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕದಲ್ಲಿ ಉದ್ಘಾಟನೆ ಗೊಂಡಿತು.

    ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅರುಣಾ ಜೆ ಉದ್ಘಾಟಿಸಿದರು. ಸಹಾಯಕ ಶಿಕ್ಷಣಾಧಿಕಾರಿ ದಿನೇಶ ವಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಶಿಕ್ಷಣಾಧಿಕಾರಿ ನಂದಿಕೇಶನ್ ಎನ್ ಮಾತಾಡಿ ಶಿಬಿರವು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿ ಎಂದರು ಜೊತೆಗೆ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದರು.
ಅಗಲ್ಪಾಡಿ ಅನ್ನಪೂರ್ಣೇಶ್ವರಿ ಶಾಲೆಯ ನಿವೃತ್ತ ಪ್ರಾಂಶುಪಾಲರಾದ ಶ್ರೀನಿವಾಸ ಭಟ್ ಮುಖ್ಯ ಅಥಿತಿಗಳಾಗಿ ಮಾತಾಡಿ ಸಂಸ್ಕೃತ ಭಾಷೆಯ ಮಹತ್ವ ತಿಳಿಸಿದರು ಇದೇ ಸಂದರ್ಭದಲ್ಲಿ ಇವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. 
ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹಿಂ ಅಧ್ಯಕ್ಷತೆ ವಹಿಸಿದರು.
19 ಶಾಲೆಯ ಆಯ್ದ ನೂರಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸಿದರು.

ಶಾಲಾ ಮನೇಜರ್ ಶಂಕರನಾರಾಯಣ ಭಟ್,ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಗೋವಿಂದ ಭಟ್, ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ಎನ್ ರಾಮಚಂದ್ರ ಭಟ್, ಎ ಯು ಪಿ ಶಾಲ ಮುಖ್ಯೋಪಾಧ್ಯಾಯ ಮಹಾಲಿಂಗ ಭಟ್ ಕಾರ್ಯಕ್ರಮಕ್ಕೆ ಶುಭಾಶಂಸನೆ ಗೈದರು.








Monday, September 16, 2019

ಪುತ್ತಿಗೆ ಕೃಷಿ ಭವನದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆದ ಕೃಷಿ ಸಂಬಂಧಿ ರಸ ಪ್ರಶ್ನೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದ ದುರ್ಗಾ ಪರಮೇಶ್ವರೀ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಕ್ಷಯ ಗಣಪತಿ ಹಾಗೂ ವಿಶ್ವಜಿತ್ ಕೆ ಶಾಲಾ ಮುಖ್ಯೋಪಾಧ್ಯಾಯರೊಂದಿಗೆ....