Saturday, July 15, 2017
Friday, July 07, 2017
ಜುಲೈ 7 2017ರಂದು ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಬೇಕೂರು ಶಾಲೆಯ ನಿವೃತ ಮುಖ್ಯೋಪಾಧ್ಯಾಯರಾದ ಶ್ರೀ ಸುಬ್ರಾಯ ನoದೋಡಿ ಅವರು ತರಗತಿ ನಡೆಸಿದರು. ನೆಲ, ಜಲ, ವಾಯುವಿನ ಸಂರಕ್ಷಣೆ ನಮ್ಮ ಕರ್ತವ್ಯ. ಇಂದಿನ ದಿನಗಳಲ್ಲಿ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ
ಕರ್ತವ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಮನುಷ್ಯನ ಅತಿಯಾಸೆಯಿಂದಾಗಿ ನೀರು, ಭೂಮಿ, ಅರಣ್ಯ ನಾಶವಾಗುತ್ತಿದ್ದು, ಇದರಿಂದ ಮನುಷ್ಯ
ಸೇರಿದಂತೆ ಜೀವ ಸಂಕುಲದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ನೀರು, ಭೂಮಿ ಮತ್ತು ಗಾಳಿ
ಮಲಿನವಾಗುತ್ತಿರುವುದರಿಂದ ಮನುಷ್ಯನ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.
ನಿಸರ್ಗವನ್ನು ಪುನ: ಸೃಷ್ಟಿಸುವುದು ಕಷ್ಟಸಾಧ್ಯವಾಗಿದ್ದು, ಈ ಕಾರಣಕ್ಕಾಗಿ
ಪ್ರತಿಯೊಬ್ಬರು ಪರಿಸರ ರಕ್ಷಣೆಗೆ ಒತ್ತು ನೀಡಬೇಕಾಗಿದೆ. ಪರಿಸರ ಸಂರಕ್ಷಣೆಯ ಬಗ್ಗೆ
ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಶ್ರೀ ಯನ್ ರಾಮಚಂದ್ರ ಭಟ್ ಪ್ರಾಂಶುಪಾಲರು ಸ್ವಾಗತಿಸಿ, ಸಮಾಜ ಅಧ್ಯಾಪಕರಾದ ಸತೀಶ್ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಶಿವಪ್ರಸಾದ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.
ಶ್ರೀ ಯನ್ ರಾಮಚಂದ್ರ ಭಟ್ ಪ್ರಾಂಶುಪಾಲರು ಸ್ವಾಗತಿಸಿ, ಸಮಾಜ ಅಧ್ಯಾಪಕರಾದ ಸತೀಶ್ ಕುಮಾರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಶಿವಪ್ರಸಾದ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.
Friday, June 30, 2017
ವಾಚನ ಸಪ್ತಾಹ ಆಚರಣೆಯ ಅಂಗವಾಗಿ ಸಂಸ್ಕೃತ ಸಂಘದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಮುಖ್ಯ ಶಿಕ್ಷಕರಾದ ಶ್ರೀ ರಾಮಚಂದ್ರ ಭಟ್ ಅಧ್ಯಕ್ಷ ಸ್ಥಾನವನ್ನು ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಹಿತವಚನಗಳನ್ನಿತ್ತರು. ಮುಖ್ಯ ಅಥಿತಿಗಳಾಗಿ ಪರಿಸರ ಸಂಘದ ಅಧ್ಯಾಪಕರಾದ ಶ್ರೀ ನರಸಿಂಹ ರಾಜ ಮಾಸ್ಟರ್ ಆಗಮಿಸಿ ಶುಭಕೋರಿದರು. ಸಂಸ್ಕೃತ ಅಧ್ಯಾಪಕರಾದ ಶ್ರೀ ಶಿವನಾರಾಯಣ ಭಟ್ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯ ಆದರ್ಶ್ ಇ ಎಚ್ ಸ್ವಾಗತಿಸಿ, ಜತೆಕಾರ್ಯದರ್ಶಿ ಅಪೂರ್ವ ಎಡಕ್ಕಾನ ವಂದಿಸಿದರು. ಸಂಘದ ಕಾರ್ಯದರ್ಶಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದನು. ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರಗಿದವು.
Subscribe to:
Posts (Atom)


















